Fact Check: ಇಸ್ರೇಲ್ ಜೊತೆ ನಿಂತಿದ್ದಕ್ಕೆ ಮೋದಿಗೆ ಧನ್ಯವಾದ ಎಂದ ಇಸ್ರೇಲಿಗರು ಎಂದು ಹಳೇಯ ವೀಡಿಯೊ ವೈರಲ್
ಇಸ್ರೇಲ್ ಜೊತೆ ನಿಂತಿದ್ದಕ್ಕೆ ಮೋದಿಗೆ ಇಸ್ರೇಲಿಗರು ಧನ್ಯವಾದ ಹೇಳಿದ್ದಾರೆ ಎಂದು ವೈರಲ್ ಆಗುತ್ತಿರುವ ವೀಡಿಯೊ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ.
By - Vinay Bhat |
Claim:ಇಸ್ರೇಲ್ ಜೊತೆ ನಿಂತಿದ್ದಕ್ಕೆ ಇಸ್ರೇಲಿಗರು ಮೋದಿಗೆ ಧನ್ಯವಾದ ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
Fact:ಹಕ್ಕು ಸುಳ್ಳು. ಇದು 2024 ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಯ ವೀಡಿಯೊವಾಗಿದೆ.
ಇಸ್ರೇಲಿ ಧ್ವಜ ಧರಿಸಿ ವಿದೇಶಿಯೊಬ್ಬ "ಜೈ ಶ್ರೀ ರಾಮ್" ಎಂದು ಘೋಷಣೆ ಕೂಗುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸದ್ಯ ಸಾಗುತ್ತಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಇದನ್ನ ಲಿಂಕ್ ಮಾಡಲಾಗುತ್ತಿದ್ದು, ನರೇಂದ್ರ ಮೋದಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಇಸ್ರೇಲಿಗರು ಧನ್ಯವಾದ ಹೇಳಿದ್ದಾರೆ ಎಂದು ಹೇಳುತ್ತಿದ್ದಾರೆ.
ಫೇಸ್ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಇಸ್ರೇಲ್ ಜೊತೆ ನಿಂತಿದ್ದಕ್ಕೆ ಮೋದಿಗೆ ಧನ್ಯವಾದ ಎಂದ ಇಸ್ರೇಲಿಗರು’’ ಎಂದು ಬರೆದುಕೊಂಡಿದ್ದಾರೆ. (Archive)
Fact Check
ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಇದು 2024 ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಯ ವೀಡಿಯೊವಾಗಿದೆ.
ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಪ್ರಮುಖ ಚೌಕಟ್ಟುಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಾಟ ನಡೆಸಿದಾಗ, ಇದೇ ರೀತಿಯ ವೀಡಿಯೊವನ್ನು ಹೊಂದಿರುವ ಮಾಧ್ಯಮ ವರದಿಗಳು ಕಂಡುಬಂದಿವೆ. ಏಪ್ರಿಲ್ 29, 2024 ರಂದು ಇಂಡಿಯಾ ಟುಡೇ ಹಂಚಿಕೊಂಡ ಎಕ್ಸ್ ಪೋಸ್ಟ್‌ನಲ್ಲಿ, ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪ್ಯಾಲೆಸ್ಟೈನ್ ಪರ ಪ್ರದರ್ಶನದಲ್ಲಿ ಕೆಲವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದಾಗ, ಇಸ್ರೇಲ್ ಪರ ವ್ಯಕ್ತಿಯೊಬ್ಬರು ಪ್ರತಿಕ್ರಿಯೆಯಾಗಿ ಜೈ ಶ್ರೀ ರಾಮ್ ಹೇಳಿದರು ಎಂದು ಹೇಳಲಾಗಿದೆ.
A video went viral on social media where a pro-Israel protester at the University of California in Los Angeles is heard chanting "Jai Shri Ram" in response to anti-India rhetoric during the pro-Palestine demonstrations. Watch the video to know more.Input: @KediaRiddhima… pic.twitter.com/nhXZejEwP5
— IndiaToday (@IndiaToday) April 29, 2024
ಇದೇವೇಳೆ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ನೊಂದಿಗೆ ಹಿಂದೂಸ್ತಾನ್ ಟೈಮ್ಸ್ಮೇ 01, 2024 ರಂದು ಪ್ರಕಟಿಸಿದ ವರದಿಯಲ್ಲಿ ಈ ವೀಡಿಯೊ ಲಾಸ್ ಏಂಜಲೀಸ್ ವಿಶ್ವವಿದ್ಯಾಲಯದ್ದಾಗಿದೆ ಎಂದು ಹೇಳಿದೆ. ಏಪ್ರಿಲ್‌ನಲ್ಲಿ, ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ಯಾಲೆಸ್ಟೈನ್ ಪರ ರ್ಯಾಲಿಗಳನ್ನು ಆಯೋಜಿಸಲಾಗಿತ್ತು. ಲಾಸ್ ಏಂಜಲೀಸ್‌ನಲ್ಲಿ ನಡೆದ ಅಂತಹ ಒಂದು ಪ್ರತಿಭಟನೆಯಲ್ಲಿ, ಇಸ್ರೇಲ್ ಪರ ಪ್ರತಿಭಟನಾಕಾರರು ಸಹ ಹೊರಬಂದು ಪ್ಯಾಲೆಸ್ಟೈನ್ ಪರ ಪ್ರತಿಭಟನಾಕಾರರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದು ಎರಡೂ ಕಡೆಯ ನಡುವೆ ಘರ್ಷಣೆಗೆ ಕಾರಣವಾಯಿತು ಎಂಬ ಮಾಹಿತಿ ಇದರಲ್ಲಿದೆ.
ಇಸ್ರೇಲ್ ಪರ ಪ್ರತಿಭಟನಾಕಾರನೊಬ್ಬ ಅಮೇರಿಕನ್ ವಿಶ್ವವಿದ್ಯಾಲಯದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಎಂದು ಮೇ 01, 2024 ರಂದು ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ನೊಂದಿಗೆ ಅನೇಕ ಮಾಧ್ಯಮ ಸುದ್ದಿ ಹಾಗೂ ವೀಡಿಯೊ ವರದಿ ಪ್ರಕಟಿಸಿರುವುದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.
ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಇಸ್ರೇಲ್ ಜೊತೆ ನಿಂತಿದ್ದಕ್ಕೆ ಮೋದಿಗೆ ಇಸ್ರೇಲಿಗರು ಧನ್ಯವಾದ ಹೇಳಿದ್ದಾರೆ ಎಂದು ವೈರಲ್ ಆಗುತ್ತಿರುವ ವೀಡಿಯೊ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ.