ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಶುರುವಾಗಿದ್ದು, ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಸುರಿದ ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಲಿಕಾನ್ ಸಿಟಿಯಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ರೋಡ್ಗಳೆಲ್ಲ ಕೆರೆಯಂತಾಗಿದೆ. ಇದರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಆಗುತ್ತಿದ್ದು, ಇದರಲ್ಲಿ ಬಸ್ ಒಳಗೆ ನೀರು ಹರಿಯುವುದನ್ನು ಕಾಣಬಹುದು. ಇದು ಮೊನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾದ ಘಟನೆ ಎಂದು ಅನೇಕರು ಹಂಚಿಕೊಳ್ಳುತ್ತಿದ್ದಾರೆ.
ಫೇಸ್ಬುಕ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ‘‘ಮಹಾಮಳೆಗೆ ಬಸ್ ಒಳಗೆ ನುಗ್ಗಿದ ಮಳೆ ನೀರು’’ ಎಂದು ಬರೆದುಕೊಂಡಿದ್ದಾರೆ. (Archive)
ಇದೇರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು.
Fact Check:
ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಇದು ಒಂದು ವರ್ಷದ ಹಳೆಯ ವೀಡಿಯೊ ಆಗಿದೆ.
ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್ನಲ್ಲಿ ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ. ಈ ಸಂದರ್ಭ ಅಕ್ಟೋಬರ್ 23, 2024 ರಂದು ನಮ್ಮಹೊಸೂರ್ ಅಫೀಶಿಯಲ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದೇ ವೈರಲ್ ವೀಡಿಯೊವನ್ನು ಕಂಡುಕೊಂಡಿದ್ದೇವೆ.
‘ಬಿಎಂಟಿಸಿ ಬಸ್ ಒಳಗೆ ನೀರು ನುಗ್ಗಿದೆ’ ಎಂದು ಅಕ್ಟೋಬರ್ 23, 2024 ರಂದು ಎಕ್ಸ್ ಬಳಕೆದಾರರೊಬ್ಬರು ಅದೇ ವೈರ;್ ವೀಡಿಯೊವನ್ನು ಹಂಚಿಕೊಂಡಿರುವುದು ನಾವು ಕಂಡುಕೊಂಡಿದ್ದೇವೆ.
ಇದು ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಂದು ನಿಖರವಾದ ಮಾಹಿತಿ ಪಡೆಯಲು ನಮ್ಮಿಂದ ಸಾಧ್ಯವಾಗಲಿಲ್ಲ. ಆದರೆ, ವೈರಲ್ ಆಗುತ್ತಿರುವ ವೀಡಿಯೊ ಈಗಿನದ್ದಲ್ಲ ಹಳೆಯದು ಎಂದು ನಾವು ಖಚಿತವಾಗಿ ಹೇಳುತ್ತೇವೆ.