Fact Check: ಸೋಶಿಯಲ್ ಮೀಡಿಯಾದಲ್ಲಿ ದೇಹ ಪ್ರದರ್ಶನ ಮಾಡುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸುತ್ತೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆಯೇ?

"ಅನುಚಿತ ಬಟ್ಟೆ" ಧರಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸಲಾಗುವುದು ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಹ ಅಳಿಸಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ ಎಂಬ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

By -  Vinay Bhat
Published on : 27 Feb 2026 7:23 PM IST

Fact Check: ಸೋಶಿಯಲ್ ಮೀಡಿಯಾದಲ್ಲಿ ದೇಹ ಪ್ರದರ್ಶನ ಮಾಡುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸುತ್ತೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆಯೇ?
Claim:ಸೋಶಿಯಲ್ ಮೀಡಿಯಾದಲ್ಲಿ ದೇಹ ಪ್ರದರ್ಶನ ಮಾಡುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸುತ್ತೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
Fact:ಹಕ್ಕು ಸುಳ್ಳು. ರಾಷ್ಟ್ರಪತಿ ದ್ರೌಪದಿ ಮುರ್ಮು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ.

"ಅನುಚಿತ ಬಟ್ಟೆ" ಧರಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸಲಾಗುವುದು ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಹ ಅಳಿಸಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ ಎಂಬ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ಪೋಸ್ಟ್ ಹಂಚಿಕೊಂಡು, ‘‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದೇನೆಂದರೆ, ಯಾವ ಹುಡುಗಿಯರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ದೇಹ ಪ್ರದರ್ಶನ ಮಾಡುತ್ತಾರೋ ಅಥವಾ ಅಶ್ಲೀಲ ವಿಡಿಯೋಗಳನ್ನು ಮಾಡುತ್ತಾರೋ ಅದು ಸಣ್ಣ ಹುಡುಗರ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಮತ್ತು ಅತ್ಯಾಚಾರದಂತಹ ಘಟನೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಇಂತಹ ಹುಡುಗಿಯರ ಅಕೌಂಟ್‌ಗಳನ್ನು ಡಿಲೀಟ್ ಮಾಡಲಾಗುವುದು ಮತ್ತು ಅವರ ಮೇಲೆ ಕೇಸ್ ಕೂಡ ದಾಖಲಿಸಲಾಗುವುದು’’ ಎಂದು ಬರೆದುಕೊಂಡಿದ್ದಾರೆ. (Archive)


Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ಪೋಸ್ಟ್ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ವೈರಲ್ ಆಗಿರುವ ಈ ಹೇಳಿಕೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್ ಹುಡುಕಾಟ ನಡೆಸಿದ್ದೇವೆ. ಆದರೆ, ಈ ಹೇಳಿಕೆ ಕುರಿತು ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ನಮಗೆ ಸಿಗಲಿಲ್ಲ. ಹುಡುಗಿಯರ ಉಡುಪಿನ ಬಗ್ಗೆ ಅವರು ಅಂತಹ ಹೇಳಿಕೆ ನೀಡಿದ್ದರೆ, ಅದು ದೊಡ್ಡ ಸುದ್ದಿಯಾಗುತ್ತಿತ್ತು.

ನಂತರ ನಾವು ರಾಷ್ಟ್ರಪತಿಯವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲೂ ಹುಡುಕಿದೆವು. ಆದರೆ, ವೈರಲ್ ಹಕ್ಕಿಗೆ ಹೋಲುವ ಯಾವುದೇ ಹೇಳಿಕೆಗಳು ಇಲ್ಲು ಕಂಡುಬಂದಿಲ್ಲ.

ತನಿಖೆಯ ಸಮಯದಲ್ಲಿ, ಫೆಬ್ರವರಿ 24 ರಂದು ಪಿಐಬಿ ಫ್ಯಾಕ್ಟ್ ಚೆಕ್‌ನ ಎಕ್ಸ್-ಅಕೌಂಟ್‌ನಲ್ಲಿ ಪೋಸ್ಟ್ ಒಂದನ್ನು ನಾವು ಕಂಡುಕೊಂಡೆವು. ಈ ಪೋಸ್ಟ್‌ನಲ್ಲಿ, ಪಿಐಬಿ ವೈರಲ್ ಹೇಳಿಕೆಯನ್ನು ನಿರಾಕರಿಸಿದ್ದು, "ಅಧ್ಯಕ್ಷರ ಹೆಸರಿನಲ್ಲಿ ಹರಡುತ್ತಿರುವ ನಕಲಿ ಹೇಳಿಕೆಗಳ ಬಗ್ಗೆ ಎಚ್ಚರದಿಂದಿರಿ. ಅನುಚಿತ ಉಡುಪುಗಳನ್ನು ಪೋಸ್ಟ್ ಮಾಡುವ ಯಾವುದೇ ನಟಿಯ ಆಧಾರ್ ಕಾರ್ಡ್ ಅನ್ನು ನಿಷೇಧಿಸಲಾಗುವುದು ಮತ್ತು ಅವರ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಳಿಸಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ ಎಂದು ಹೇಳುವ ಇನ್‌ಸ್ಟಾಗ್ರಾಮ್ ರೀಲ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಹೇಳಿಕೆ ಸುಳ್ಳು. ಅಧ್ಯಕ್ಷೆ ದ್ರೌಪದಿ ಮುರ್ಮು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ" ಎಂದು ಬರೆದಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಅನುಚಿತ ಬಟ್ಟೆ ಧರಿಸಿ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಹುಡುಗಿಯರ ಮೇಲೆ ಪ್ರಕರಣ ದಾಖಲಿಸಲಾಗುವುದು ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಹ ಅಳಿಸಲಾಗುವುದು ಎಂದು ರಾಷ್ಟ್ರಪತಿಗಳು ಹೇಳಿಕೆ ನೀಡಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ. ವೈರಲ್ ಆಗಿರುವ ಈ ಹಕ್ಕು ಸುಳ್ಳು.
Claimed By:Facebook User
Claim Reviewed By:NewsMeter
Claim Source:Social Media
Claim Fact Check:False
Fact:ಹಕ್ಕು ಸುಳ್ಳು. ರಾಷ್ಟ್ರಪತಿ ದ್ರೌಪದಿ ಮುರ್ಮು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ.
Next Story